ಸಿದ್ದರಾಮಯ್ಯ, ಯಡಿಯೂರಪ್ಪಗೆ ಇಂದು ಬಿಗ್ ಡೇ
ಬೆಂಗಳೂರು : ಇಂದು ಸಿಎಂ ಹಾಗೂ ಮಾಜಿ ಸಿಎಂಗೆ ಬಿಗ್ ಡೇ ಆಗಿದೇ. ಹೌದು ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಕರಣಗಳ ತೀರ್ಪು ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ಪ್ರಕಟವಾಗಲಿದೆ. ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ.