ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಎಂಟ್ರಿ!

Date:

ಬೆಂಗಳೂರು:- ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಎಂಟ್ರಿಯಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯದರ್ಶಿ ರಾಜೇಶ್​ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ಈ ವಿಚಾರದ ಬಗ್ಗೆ ದೂರುದಾರರಿಗೆ ನೇರವಾಗಿ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ. ಇದರೊಂದಿಗೆ ಪ್ರಾಸಿಕ್ಯೂಷನ್ ವಿಚಾರ ರಾಷ್ಟ್ರಪತಿ ಭವನದ ಅಂಗಳಕ್ಕೂ ತಲುಪಿದೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್​​ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...