ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ಸಭೆ ನಡೆಸಲಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲು ಮೂವರು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕನ ಸ್ಥಾನ ನೀಡಬೇಕೆಂದು ಹೆಚ್.ಕೆ. ಪಾಟೀಲ್ ಮನವಿ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಬೆಂಬಲಿಗ ಶಾಸಕರಿಂದ ಸಹಿ ಸಂಗ್ರಹ ನಡೆಸಲಾಗಿದೆ. ಶಾಸಕರಾದ ಕೃಷ್ಣಬೈರೇಗೌಡ, ಜಮೀರ್ ಅಹಮದ್, ಬೈರತಿ ಸುರೇಶ್, ರಿಜ್ವಾನ್ ಅರ್ಷದ್ ಅವರಿಂದ ಸಿದ್ಧರಾಮಯ್ಯರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಸಹಿ ಸಂಗ್ರಹ ಮಾಡಿ ಎಐಸಿಸಿ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಅವರಿಗೆ ಸಲ್ಲಿಸಲಾಗುವುದು ಎನ್ನಲಾಗಿದೆ.