ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ರೇಟ್ ಕಾರ್ಡ್ ವಿರುದ್ಧ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ.
ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ. ಇಲಾಖೆಗಳಲ್ಲಿ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ. ಈ ರೇಟ್ ಕಾರ್ಡ್ ಫಿಕ್ಸ್ ಸತ್ಯ ಎಂದು ಆರೋಪಿಸಿದರು. ಇನ್ನೂ ರೇಟ್ ಕಾರ್ಡ್ ಸತ್ಯ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇವರ ಭ್ರಷ್ಟಾಚಾರ ಬರಿಗಣ್ಣಿಗೆ ಕಾಣತ್ತೆ. ನಲವತ್ತು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅಂತಾರೆ ಸಿದ್ದರಾಮಯ್ಯ. ಇದನ್ನ ಯಾರೂ ಒಪ್ಪಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ: ಸಿ.ಟಿ.ರವಿ
Date: