ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಪಡಿಸಬೇಡಿ: ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್’ಗೆ ಸುಪ್ರೀಂ ಸೂಚನೆ
ನವದೆಹಲಿ: ಥಗ್ ಲೈಫ್’ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಮಲ್ ಹಾಸನ್ “ಕನ್ನಡ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಿನಿಮಾ ಬ್ಯಾನ್ಗೆ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಪಡಿಸಬೇಡಿ. ರಿಲೀಸ್ ಆಗಬೇಕು. ನಿಮಗೆ ಇಷ್ಟ ಇಲ್ಲದಿದ್ದರೆ ಸಿನಿಮಾ ನೋಡಬೇಡಿ. ತಡೆ ನಿಡೋದು, ಬೆದರಿಕೆ ಒಡ್ಡೋದು ಸರಿಯಲ್ಲ ಎಂದು ಆದೇಶ ನೀಡಿದೆ.
ಸಿಬಿಎಫ್ಸಿ ಸರ್ಟೀಫಿಕೇಟ್ ಬಳಿಕ ಸಿನಿಮಾ ಬಿಡುಗಡೆ ಮಾಡಬಹುದು. ಸಿಬಿಎಫ್ಸಿ ಸರ್ಟಿಫಿಕೇಟ್ ಸಿನಿಮಾ ಪ್ರದರ್ಶಿಸುವ ಕಾನೂನನ್ನು ದೇಶದಲ್ಲಿ ಅನುಸರಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ, ಕರ್ನಾಟಕ ಸರ್ಕಾರಕ್ಕೆ ಸಿನಿಮಾ ವಿಚಾರವಾಗಿ ನೋಟಿಸ್ ಕೂಡ ನೀಡಿದೆ. ಇನ್ನು ಹೈಕೋರ್ಟ್ನಲ್ಲಿ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್, ಟ್ರಾನ್ಸ್ಫರ್ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯಬೇಕಿದ್ದ ಮುಂದಿನ ಎಲ್ಲಾ ವಿಚಾರಣೆಗಳು ಸುಪ್ರೀಂ ಕೋರ್ಟ್ನಲ್ಲಿಯೇ ನಡೆಯಲಿವೆ.