ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

tnit editors
1 Min Read

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿಯಾಗಿರುವ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಪ್ರಣವ್ (1 ವರ್ಷ 8 ತಿಂಗಳು) ಮೃತಪಟ್ಟ ಬಾಲಕನಾಗಿದ್ದು, ನವಂಬರ್ 7 ರಂದು ಸಂಜೆ 3.11 ಸುಮಾರಿಗೆ ನಡೆದ ದುರ್ಘಟನೆಯಾಗಿದೆ.

ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ ಎಂದು ಗುರುತಿಸಲಾಗಿದೆ. ಮಗುವಿಗೆ ಒಂದು ವರ್ಷ 8 ತಿಂಗಳು. ನ.7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ ವೈರಿಂಗ್ ವಿದ್ಯುತ್ ತಂತಿ ಲಾರಿಗೆ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಕೂಗಿಕೊಂಡಿದ್ದಾರೆ. ಆದರೆ ಚಾಲಕ ಗಮನಿಸದೇ ಲಾರಿ ಚಲಾಯಿಸಿದ್ದರಿಂದ ವೈರಿಂಗ್ ಕಂಬ ಕಿತ್ತು ಬಂದಿದೆ.

ಅಲ್ಲದೇ ಮನೆಯ ಗೋಡೆ ಕುಸಿದು ಆಟ ಆಡ್ತಿದ್ದ ಮಗುವಿನ ಮೇಲೆ ಬಿದ್ದಿದೆ ಗಂಭೀರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಉಸಿರುಚೆಲ್ಲಿದೆ. ಈ ಘಟನೆ ನಡೆದ ಕೂಡಲೇ ಲಾರಿ ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article