ಸಿಲಿಂಡರ್ ಬೆಲೆ ಮತ್ತೆ ಏರಿಕೆ!

0
37

ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ.

ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದಲ್ಲದೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 75 ರೂ. ನಷ್ಟು ಏರಿಸಲಾಗಿದೆ.

 

ಬೆಲೆ ಹೆಚ್ಚಳದ ಬಳಿಕ ರಾಜಧಾನಿ ದೆಹಲಿಯಲ್ಲಿ ಗೃಹ ಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 884.50 ರು ಪ್ರತಿ ಸಿಲಿಂಡರ್ ಆಗಿದೆ. ಜುಲೈ 1ರಂದು ಸಿಲಿಂಡರ್ ಬೆಲೆ 25.50 ರು ಹೆಚ್ಚಿಸಲಾಗಿತ್ತು. ಆಗಸ್ಟ್ 17ರಂದು ಮತ್ತೊಮ್ಮೆ 25 ರು ಹೆಚ್ಚಳವಾಗಿತ್ತು. ಬೆಂಗಳೂರು ನಗರದಲ್ಲಿ ಆಗಸ್ಟ್ ತಿಂಗಳಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗಳಿಗೆ ಏರಿಕೆಯಾಗಿತ್ತು. ಸೆ.1ರಿಂದ 887.5 ರು ನೀಡಬೇಕಾಗುತ್ತದೆ.

ಮೇ 1, 2014ರಲ್ಲಿ 410.50 ರು ಇದ್ದ ಸಿಲಿಂಡರ್ ಬೆಲೆ ದ್ವಿಗುಣವಾಗಿ ಈಗ ಸರಾಸರಿ 859.50 ರು ನಷ್ಟಾಗಿದೆ. 2021ರ ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿತ್ತು. ಒಟ್ಟಾರೆ ಕಳೆದ 2020ರ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಂಡಿತ್ತು. ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಒಟ್ಟಾರೆ ಜನವರಿ 1, 2021ರಿಂದ ಸೆಪ್ಟೆಂಬರ್ 1, 2021 ಅವಧಿಯಲ್ಲಿ 190 ರು ನಷ್ಟು ಬೆಲೆ ಏರಿಕೆಯಾಗಿದೆ.

 

 

LEAVE A REPLY

Please enter your comment!
Please enter your name here