ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಮತ್ತೊಂದು ದುರ್ಘಟನೆ ನಡೆದಿದೆ. ಹೌದು ಯಲಹಂಕದ ಎಲ್ಬಿಎಸ್ ಲೇಔಟ್ನ ಮನೆಯೊಂದ ರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಹಾನಿಯಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.