ಸಿಲಿಂಡರ್ ಸ್ಫೋಟ ದುರಂತ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ
ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 5ಕ್ಕೇರಿಕೆಯಾಗಿದೆ. ಶಂಕರ ಚವ್ಹಾಣ್ (29) ಮೃತ ಮಾಲಾಧಾರಿಯಾಗಿದ್ದು, ಚಿಕ್ಕವನಿದ್ದಾಗಲೇ ತಂದೆ, ತಾಯಿಯನ್ನು ಕಳೆದುಕೊಂಡಿದ್ದ ಶಂಕರ್ ಅವರು ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ಇದೆ ಮೊದಲ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ್ದ ಶಂಕರ್ ಸೋಮವಾರ ನಡೆದ ಸಿಲಿಂಡರ್ ಬ್ಲಾಸ್ಟ್ನಿಂದ ಗಂಭೀರವಾಗಿ ಗಾಯಗೊಂಡಿದ್ದರು. ಶಂಕರ್ ಸಾವಿನೊಂದಿಗೆ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾದಂತಾಗಿದೆ. ಉಳಿದ ನಾಲ್ವರಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ.