ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ ಕಾರು ಜಖಂ – ವ್ಯಕ್ತಿ ಮೇಲೆ ಹಲ್ಲೆ

Date:

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ ಕಾರು ಜಖಂ – ವ್ಯಕ್ತಿ ಮೇಲೆ ಹಲ್ಲೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ನಿಲ್ಲಿಸಿದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಹಲ್ಲೆ‌ ಮಾಡಿರುವ ಘಟನೆ ನಗರದ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ಭಾನುವಾರ ರಾತ್ರಿ ಘಟನೆ ಜರುಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಗಂಗೇಗೌಡ ಎಂಬುವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸದ ದೃಶ್ಯಾವಳಿ ಸೆರೆಯಾಗಿದೆ.
ಈ ಗ್ಯಾಂಗ್, ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಎಣ್ಣೆ ಹಾಕುತ್ತಾ ಕುಳಿತಿತ್ತು. ಇದನ್ನ ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ನಂತರ ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಜಖಂ ಮಾಡಿದ್ದಾರೆ. ಸಿಮೆಂಟ್ ಇಟ್ಟಿಗೆಯಿಂದ ಕಾರಿನ ಗಾಜು ಒಡೆದ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ.
ಈ ವೇಳೆ ಕಿಡಿಗೇಡಿಗಳನ್ನ ಓಡಿಸಲು ಶಿವಗಂಗೆಗೌಡರು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಶಿವಗಂಗೆಗೌಡ ಮೇಲೆ ಗ್ಯಾಂಗ್ ಅಟ್ಯಾಕ್ ಮಾಡಿದೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದ್ದು, ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ

ಸಂತೋಷದಿಂದ ಹಬ್ಬವನ್ನು ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ: ನಿಖಿಲ್ ಕುಮಾರಸ್ವಾಮಿ ಬೆಂಗಳೂರು...

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ: 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು: ರಾಜ್ಯದ...

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ

ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ ಮಧ್ಯಾಹ್ನ ಊಟದ ನಂತರ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು ಬೆಂಗಳೂರು:...