ಸಿಲಿಕಾನ್ ಸಿಟಿಯಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಕೊನೆಗೂ ಆರೋಪಿ ಅರೆಸ್ಟ್.!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್ ಆಗಿದ್ದ ಆರೋಫಿಯನ್ನು ಕೊನೆಗೂ ಪೊಲೀಸರು ಬಂಧಿಸದ್ದಾರೆ. ತಮ್ಸುದ್ದಿನ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆ ಹಾಗೂ ಆರೋಪಿ ತಮ್ಸುದ್ದಿನ್ ಲಿವಿಂಗ್ ರಿಲೇಶನ್ಸ್ ಶಿಪ್ ನಲ್ಲಿನದ್ದರು. ಇಬ್ಬರ ನಡುವೆ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಕೊಲೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ವಿಚಾರ ಬಹಿಂಗವಾಗಿದೆ.
ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಪುಷ್ಪಾ @ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು.
ಕಳೆದ ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಆದರೆ ಮೃತ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಮೂಟೆಗೆ ಹಾಕಿ,
ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ. ಆಶಾಗೆ ಇದಕ್ಕೂ ಮೊದಲು ಮದುವೆಯಾಗಿದ್ದು, ಗಂಡ ಮೃತಪಟ್ಟಿದ್ದ. ಆಕೆಗೆ ಇಬ್ಬರು ಮಕ್ಕಳಿದ್ದರು. ಜೊತೆಗೆ ಆರೋಪಿ ಸಂಶುದ್ದೀನ್‌ಗೆ ಮದುವೆಯಾಗಿ ಹೆಂಡತಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿದ್ದರು ಎಂದು ಬಯಲಾಗಿದೆ.