Home ಎಲ್ಲೆಲ್ಲಿ ಏನೇನು.? ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

0
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಬೆಂಗಳೂರು:  ಸಿಲಿಕಾನ್ ಸಿಟಿ ಬೆಂಗಳೂರಿನ ಜಯನಗರದ ಅಶೋಕ ಪಿಲ್ಲರ್ ಬಳಿ ಹಾಡಹಗಲೇ ಬರೋಬ್ಬರಿ 7 ಕೋಟಿ ರೂಪಾಯಿ ದರೋಡೆ ನಡೆದಿದೆ. ಸಿಎಂಎಸ್ ಕಂಪನಿಯ ಎಟಿಎಂ ಹಣ ತುಂಬುವ ವಾಹನವು ಜೆ.ಪಿ. ನಗರದ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಹಣ ತರುತ್ತಿದ್ದಾಗ, ಇನೋವಾ ಕಾರಿನಲ್ಲಿ ಬಂದ ದರೋಡೆಕೋರರು ವ್ಯಾನ್ ಅಡ್ಡಗಟ್ಟಿದ್ದಾರೆ.

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೇರಿ ಸರ್ಕಲ್​ನಲ್ಲಿ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್​​ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ.

ಗನ್​​ಮ್ಯಾನ್​​ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.