ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ನಲ್ಲಿ ಕಾಲರಾ ರೋಗ ಬಾಧಿಸಿರುವುದು ಸ್ಪಷ್ಟವಾಗಿದೆ. ಸದ್ಯ ಇಬ್ಬರು ವಿದ್ಯಾರ್ಥಿನಿಯರ ಪರೀಕ್ಷಾ ಮಾದರಿ ಪಾಸಿಟಿವ್ ಬಂದಿದೆ. ಸರಾಸರಿ 47 ವೈದ್ಯರಿಗೆ ಕಾಲರಾ ಅಟ್ಯಾಕ್ ಆಗಿರುವ ಬಗ್ಗೆ ಸುದ್ದಿಯಾಗಿತ್ತು. ವಿದ್ಯಾರ್ಥಿಗಳು ವಾಂತಿ, ಭೇದಿ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಐಸಿಯು ನಲ್ಲಿ 4 ಜನ ಸಂಶೋಧನಾ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳು H ಬ್ಲಾಕ್ ನಲ್ಲಿ ದಾಖಲು ಮಾಡಲಾಗಿದೆ. ಹಾಸ್ಟೆಲ್ ಅವ್ಯವಸ್ಥೆಯಿಂದ ಕಾಲರಾ ಹರಡಿರುವ ಶಂಕೆ ವ್ಯಕ್ತವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್..!
Date: