No menu items!
9.3 C
Munich
Wednesday, April 29, 2026

ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್: ಹಳದಿ ಮಾರ್ಗ ಚಾಲನೆಗೆ ಮುಹೂರ್ತ ಫಿಕ್ಸ್!

Must read

ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್: ಹಳದಿ ಮಾರ್ಗ ಚಾಲನೆಗೆ ಮುಹೂರ್ತ ಫಿಕ್ಸ್!

 

ಬೆಂಗಳೂರು:- ಆಗಸ್ಟ್ 15ರ ಒಳಗೆ ಹಳದಿ ಮಾರ್ಗಕ್ಕೆ ಚಾಲನೆ ನೀಡಲಾಗುವುದು ಎಂದು BMRCL ಮಾಹಿತಿ ನೀಡಿದೆ. ಈ ಮೂಲಕ ಸಿಲಿಕಾನ್ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದೆ.

 

ಈ ಸಂಬಂಧ BMRCL ಎಂ.ಡಿ ಮಹೇಶ್ವರ್ ರಾವ್ ಮಾತನಾಡಿ, ಆಗಸ್ಟ್ 15ರ ಒಳಗೆ ಹಳದಿ ಮಾರ್ಗಕ್ಕೆ ಚಾಲನೆ ನೀಡಲಾಗುವುದು. ನಮಗೆ ಎರಡು ಮನವಿ ಬಂದಿದೆ. ಯೆಲ್ಲೋ ಲೈನ್ ಆರಂಭ ಮಾಡೋಕೆ ಈಗಾಗಲೇ ಮೂರು ಕೋಚ್ ಬಂದಿದೆ. ಎಲ್ಲಾ ರೆಗ್ಯುಲಾರಿಟೀಸ್ ಒಂದು ತಿಂಗಳ ಒಳಗೆ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ.

 

ಸೇಫ್ಟಿ ಟೆಸ್ಟ್ ಏಜೆನ್ಸಿ ಇದೆ. ಅವರು ಎಲ್ಲಾ ಚೆಕ್ ಮಾಡ್ತಾರೆ. ಮುಂದಿನ ವಾರದ ಒಳಗೆ ಸೇಫ್ಟಿ ಅಸೆಸ್ಮೆಂಟ್ ಟೆಸ್ಟ್ ಮುಗಿಯಬಹುದು. 17 ಕಿ.ಮೀನಲ್ಲಿ 17 ಸ್ಟೇಷನ್ ಇದೆ. ನಾವು ಸರ್ಕಾರದ ಮುಂದೆ ಹೋಗ್ತೇವೆ. ಎಲ್ಲಾ ಮಾಡೋದ ಅಥವಾ ಮೂರ್ನಾಲ್ಕು ಸ್ಟೇಷನ್‌ನಲ್ಲಿ ಮಾತ್ರ ಓಡ್ಸೋದಾ ನೋಡ್ತೀವಿ ಎಂದು ಹೇಳಿದ್ದಾರೆ.

 

ನಾವು ಆಗಸ್ಟ್ ತಿಂಗಳಲ್ಲಿ ಎಷ್ಟು ಬೇಗ ಆಗುತ್ತೋ ಅಷ್ಟು ಬೇಗ ಚಾಲನೆ ಕೊಡ್ತೀವಿ. ಜಯನಗರದಲ್ಲಿ ಅಂಡರ್ ಪಾಸ್‌ಗೆ ಮನವಿ ಕೊಟ್ಟಿದ್ದಾರೆ. ಸರ್ಕಾರ ಫಂಡಿಂಗ್ ಕೊಡುತ್ತಾ ಅಥವಾ ಇಲ್ಲವಾ ಅನ್ನುವ ಬಗ್ಗೆ ನೋಡ್ಬೇಕು ಎಂದಿದ್ದಾರೆ.

- Advertisement -spot_img

More articles

- Advertisement -spot_img

Latest article