ಸಿಸಿಬಿ ಪೊಲೀಸರಿಂದ ಮತ್ತೊಂದು ಚೈನ್ ಲಿಂಕ್ ವಂಚಕರ ಅರೆಸ್ಟ್.!

Date:

ಬೆಂಗಳೂರು:- ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನಿ ಡಬ್ಲಿಂಗ್ ಹೆಸ್ರಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಪ್ರಾಮ್ಯ ಇಂಟರ್ ನ್ಯಾಷನಲ್ ಅನ್ನೋ ನಕಲಿ ಕಂಪನಿ‌ ಹೆಸರಲ್ಲಿ ಮಹಾಮೋಸವಾಗಿರುವುದು ಬೆಳಕಿಗೆ ಬಂದಿದೆ.
ಕನಕಪುರ ಮೂಲದ ಪ್ರದೀಪ್, ಆತನ ಪತ್ನಿ ಸೌಮ್ಯ, ಏಜೆಂಟ್ ವಂಸತ್ ಎಂಬುವವರಿಂದ ವಂಚನೆ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಗೆ ಲಕ್ಷಲಕ್ಷ ಹಣಕ್ಕೆ ಆರೋಪಿಗಳು ಉಂಡೇನಾಮ ಹಾಕಿದ್ದಾರೆ. ಕೋಣನಕುಂಟೆ ಬಳಿ ಪ್ರದೀಪ್ ಕಚೇರಿ ತೆರೆದಿದ್ದ. ಅಧಿಕ‌ ಬಡ್ಡಿ, ಅಧಿಕ ಲಾಭಾಂಶ ನೀಡೋದಾಗಿ ಗ್ರಾಹಕರಿಂದ ಹಣ ಹೂಡಿಕೆ ಮಾಡಿಸಿಕೊಂಡಿದ್ದು, ಮೊದಮೊದಲು ಲಾಭಾಂಶ ನೀಡಿ ನಂಬಿಕೆಗಳಿಸಿದ್ದ.
ನಂತರ ಹೂಡಿಕೆದಾರರಿಗೆ ಹಣ ನೀಡಲು ಸತಾಯಿಸಿದ್ದರು. ಖಚಿತ ಮಾಹಿತಿ ಮೇರೆಗೆ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡಸಿದ ವೇಳೆ ಮಹಾಮೋಸ ಬೆಳಕಿಗೆ ಬಂದಿದೆ. ಸರ್ಕಾರದಿಂದ ಮಾನ್ಯತೆ ಪಡೆಯದೆ ಅನಧಿಕೃತವಾಗಿ ಕಂಪನಿ ಓಪನ್ ಆಗಿರುವುದು ತಿಳಿದು ಬಂದಿದೆ. ವಂಚನೆ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...