No menu items!
12.4 C
Munich
Wednesday, April 29, 2026

ಸಿಹಿಸುದ್ದಿ: ಈ 16 ಜಿಲ್ಲೆಗಳಿಗೆ ಅನ್ ಲಾಕ್ ಭಾಗ್ಯ

Must read

ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆರಂಭವಾಗಲಿದ್ದು, ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಲಾಕ್‌ಡೌನ್‌ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ ಈ ಘೋಷಣೆ ಮಾಡಿದ್ದಾರೆ.

ಶೇ 50ರಷ್ಟು ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್‌ಗಳ ಓಡಾಟಕ್ಕೆ ಅವಕಾಶ ನೀಡುವುದಾಗಿ ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮೆಟ್ರೋ ಓಡಾಟಕ್ಕೂ ಅವಕಾಶ ಮಾಡಿಕೊಡಲಾಗಿದ್ದು, 50% ಪ್ರಯಾಣಿಕರೊಂದಿಗೆ ಮೆಟ್ರೋ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಜುಲೈ ಒಂದರಿಂದ ಶಾಲೆಗಳನ್ನು ತೆರೆಯುವುದಾಗಿ ತಿಳಿಸಿದ್ದಾರೆ.

ತಾಂತ್ರಿಕ ಸಮಿತಿ ಸಲಹೆ ಮೇರೆಗೆ ಚರ್ಚಿಸಿ ಈ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಬೆಳಿಗ್ಗೆಯಿಂದ ಸಂಜೆ 5ರವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article