ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ
ಕನಕಪುರ: ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಶುಕ್ರವಾರ ಕನಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಯ್ ಅವರ ಸಾವಿನ ಬಗ್ಗೆ ಹಲವು ಮಾಹಿತಿಗಳು ಲಭ್ಯವಾಗುತ್ತಿವೆ. ಅಧಿಕಾರಿಗಳು ವಿಚಾರಣೆ ನಡೆಸುವ ವೇಳೆ ‘ಐದು ನಿಮಿಷ ಸಮಯ ನೀಡಿ’ ಎಂದು ಹೇಳಿ ಅವರು ಈ ರೀತಿಯ ಕ್ರಮಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬುದೂ ತಿಳಿದುಬಂದಿದೆ” ಎಂದು ಹೇಳಿದರು.
ಈ ಕುರಿತು ದೆಹಲಿಯಿಂದಲೂ ವರದಿ ಕೇಳಲಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವ ಕಾರ್ಯವನ್ನು ನಮ್ಮ ಸರ್ಕಾರ ಕೈಗೊಳ್ಳಲಿದೆ. ಸಿ.ಜೆ. ರಾಯ್ ಅವರು ಒಳ್ಳೆಯ ಉದ್ಯಮಿಯಾಗಿದ್ದರು. ಈ ರೀತಿಯ ದುರ್ಘಟನೆ ಸಂಭವಿಸಬಾರದಿತ್ತು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.






