ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ: ಹೆಚ್.ಡಿ ಕುಮಾರಸ್ವಾಮಿ
ನವದೆಹಲಿ: ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು.
ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಕಿಡಿಕಾರಿದ್ದಾರೆ. ಇನ್ನು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.