ಸಿ.ಟಿ.ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ?: ಸಿದ್ದರಾಮಯ್ಯ ಪ್ರಶ್ನೆ

tnit editors
1 Min Read

ಸಿ.ಟಿ.ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ?: ಸಿದ್ದರಾಮಯ್ಯ ಪ್ರಶ್ನೆ

ಮಂಡ್ಯ: ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.
ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.
ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

Share This Article