ಸೀತಾಫಲ ಸೇವನೆಯಿಂದ ಸಿಗುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?

Date:

ಸೀತಾಫಲ ಸೇವನೆಯಿಂದ ಸಿಗುವ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?

ಪ್ರತಿಯೊಂದು ಹಣ್ಣಿನಲ್ಲಿರುವ ಪೋಷಕಾಂಶಗಳು ಒಳಗೊಂಡಿರುತ್ತವೆ. ಹಾಗಾಗಿ ಇವುಗಳು ಆರೋಗ್ಯಕ್ಕೆ ಒಳ್ಳೆಯದು. ಸೇಬು, ಕಿತ್ತಳೆ, ಮಾವು, ಪೇರಲೆ ಈ ಹಣ್ಣುಗಳು ನೆನಪಿಗೆ ಬರುತ್ತವೆ. ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ಈ ಹಣ್ಣು ತಿರುಳಿರುವ ಭಾಗವಾಗಿದ್ದು, ಅದೇ ರುಚಿಯನ್ನು ಹೊಂದಿರುತ್ತದೆ. ಈಗ ಇದರ ಪ್ರಯೋಜನಗಳನ್ನು ನೋಡೋಣ.
ಕ್ಯಾನ್ಸರ್‌ನಂತ ಕಾಯಿಲೆಯನ್ನು ನಿಯಂತ್ರಿಸುತ್ತದೆ
ಸೀತಾಫಲದಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳಿದ್ದು ದೇಹಕ್ಕೆ ಎರಗುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳಿಂದ ರಕ್ಷಿಸುವ ಜೊತೆಗೇ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಅಲ್ಲದೇ ಇದರಲ್ಲಿ ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂ ಸಹಾ ಉತ್ತಮ ಪ್ರಮಾಣದಲ್ಲಿದ್ದು ಹೃದಯದ ಕ್ಷಮತೆ ಹೆಚ್ಚಿಸಿ ಹೃದಯಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ.
ವಿಟಮಿನ್ B6
ಸೀತಾಫಲದಲ್ಲಿ ವಿಶೇಷವಾಗಿ ವಿಟಮಿನ್ B6 ಇದೆ. ಇತರ ಆಹಾರದ ಮೂಲಕ ಅತಿ ಅಪರೂಪದಲ್ಲಿ ಸಿಗುವ ಈ ವಿಟಮಿನ್ ಮೆದುಳಿಗೆ ಅಗತ್ಯವಾದ ನ್ಯೂರೋಟ್ರಾನ್ಸ್ ಮಿಟರ್ ಅಥವಾ ನರಸಂಕೇತಗಳನ್ನು ಕೊಂಡೊಯ್ಯುವ ಡೋಪಮೈನ್ ಮತ್ತು ಸೆರೆಟೋನಿನ್ ಉತ್ಪಾದನೆಗೆ ಅಗತ್ಯವಾಗಿದೆ. ಈ ರಸದೂತಗಳು ನಮ್ಮ ಮನೋಭಾವನೆಯ ಮೇಲೆ ಪ್ರಭಾವ ಬೀರುತ್ತವೆ.

ಮಾರಕ ಕ್ಯಾನ್ಸರ್ ಮತ್ತು ಹೃದ್ರೋಗಳನ್ನು ನಿಯಂತ್ರಿಸುತ್ತದೆ
ಸೀತಾಫಲದಲ್ಲಿ ಪ್ರಬಲ ಉರಿಯೂತ ನಿವಾರಕ ಗುಣವಿದೆ. ಇದು ದೇಹವನ್ನು ಹಲವಾರು ಸೋಂಕುಗಳಿಂದ ರಕ್ಷಿಸುತ್ತದೆ ಹಾಗೂ ಮಾರಕ ಕ್ಯಾನ್ಸರ್ ಮತ್ತು ಹೃದ್ರೋಗಗಳಿಂದಲೂ ರಕ್ಷಣೆ ನೀಡುತ್ತದೆ.
ಸೌಂದರ್ಯ ಹೆಚ್ಚಿಸುತ್ತದೆ
ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ.
ಅಸ್ತಮಾ ರೋಗ ತಡೆಯುತ್ತದೆ:
ಈ ಹಣ್ಣಿನಲ್ಲಿ ವಿಟಮಿನ್ B6 ಹೇರಳವಾಗಿದ್ದು, ಇದರ ನಿಯಮಿತ ಸೇವನೆಯಿಂದ ಶ್ವಾಸನಾಳಗಳ ಆರೋಗ್ಯ ವೃದ್ದಿಸುತ್ತದೆ. ಇದರಿಂದ ನಿಮಗೆ ಅಸ್ತಮಾ ರೋಗದ ಸಮಸ್ಯೆಗಳು ತಲೆದೂರುವ ಅಪಾಯ ಕಡಿಮೆಯಾಗುತ್ತದೆ.
ಜೀರ್ಣಕ್ರಿಯೆಗೆ ಸಹಕಾರಿ:
ಸೀತಾಫಲ ಸೇವನೆಯಿಂದ ಜೀರ್ಣಕ್ರಿಯೆ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ನಿಯಮಿತವಾಗಿ ಈ ಹಣ್ಣನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಪ್ರಕ್ರಿಯೆ ಉತ್ತಮಗೊಳ್ಳುತ್ತದೆ.
ಕೊಲೆಸ್ಟ್ರಾಲ್ ಕಡಿಮೆ:
ಈ ಹಣ್ಣಿನಲ್ಲಿರುವ ನಿಯಾಸಿನ್ ಹಾಗೂ ಕರಗುವ ನಾರು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತವೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...