ಸುದೀಪ್​ಗೆ ಹೊಸ ಬಿರುದು ನೀಡಿದ ಸೈರಾ ನರಸಿಂಹ ರೆಡ್ಡಿ ಟೀಮ್..!

Date:

ಇಡೀ ದಕ್ಷಿಣ ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಭಾರಿ ನಿರೀಕ್ಷೆಯನ್ನು ಹುಟ್ಟುಹಾಕಿರುವ ಸಿನಿಮಾ ಸೈರಾ ನರಸಿಂಹ ರೆಡ್ಡಿ. ಉತ್ತರ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಬಹು ದೊಡ್ಡ ಕಲಾವಿದರು ಈ ಸಿನಿಮಾಕ್ಕೆ ಬಣ್ಣ ಹಚ್ಚಿದ್ದು, ಇದೊಂದು ಬಿಗ್ ಬಜೆಟ್ ಫಿಲ್ಮ್​ ಆಗಿದೆ. ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ನಮ್ಮ ಸ್ಯಾಂಡಲ್​ವುಡ್​ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಾಲಿವುಡ್​ ನ ಬಿಗ್​ ಬಿ ಅಮಿತಾಭ್​ ಬಚ್ಚನ್​ , ಕಾಲಿವುಡ್ ನಟ ವಿಜಯ್ ಸೇತುಪತಿ, ಜಗಪತಿ ಬಾಬು ಸೇರಿದಂತೆ ಅನೇಕ ಖ್ಯಾತ ನಾಮರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ, ಸೆಪ್ಟೆಂಬರ್ 12ಕ್ಕೆ ಸುದೀಪ್ ಪೈಲ್ವಾನ್ ಅವತಾರದಲ್ಲಿ ಬರುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಸುದೀಪ್ ಅವರಿಗೆ ಪೈಲ್ವಾನ್ ತಂಡ ಬಾದ್​ ಷಾ ಅಂತ ಬಿರುದು ನೀಡಿದ್ದು, ಅಭಿನಯ ಚಕ್ರವರ್ತಿ ಸುದೀಪ್ ಬಾದ್ ಷಾ ಸುದೀಪ್ ಆಗಿದ್ದಾರೆ.


ಅನೇಕ ಸ್ಟಾರ್ ನೇಮ್​, ಬಿರುದು ಹೊಂದಿರುವ ಸುದೀಪ್​ ಅವರಿಗೆ ಈಗ ಮತ್ತೊಂದು ಬಿರುದು ಸಿಕ್ಕಿದೆ. ಆ ಬಿರುದನ್ನು ನೀಡಿರುವುದು ಸೈರಾ ನರಸಿಂಹ ರೆಡ್ಡಿ ಟೀಮ್..!
ಹೌದು, ಸೈರಾ ನರಸಿಂಹ ರೆಡ್ಡಿ ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು, ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಮತ್ತೊಂದು ಬಿರುದನ್ನು ನೀಡಲಾಗಿದೆ..! ಸುದೀಪ್ ಹೆಸರಿನ ಜೊತೆಗೆ “ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್” ಎಂಬ ಸ್ಟಾರ್​ ನೇಮ್ ಸೇರಿಸಲಾಗಿದೆ. ಈ ಹಿಂದೆ ತಮಿಳು ಹಾಗೂ ತೆಲುಗಿನಲ್ಲಿ ಸುದೀಪ್ ಅವರ ಹೆಸರನ್ನು ಕಿಚ್ಚ ಸುದೀಪ್ ಎಂದಷ್ಟೇ ಹಾಕಲಾಗುತ್ತಿತ್ತು. ಈಗ ಸೈರಾ ಚಿತ್ರದ ಮೇಕಿಂಗ್ ನ ಟೈಟಲ್ ನಲ್ಲಿ “ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್” ಎಂಬ ಬಿರುದು ನೀಡಲಾಗಿದೆ.


ಸುದೀಪ್ ಅವರಿಗಲ್ಲದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಇಂಡಿಯಾದ ಬಿಗ್ಗೆಸ್ಟ್ ಸೂಪರ್ ಸ್ಟಾರ್ , ನಯನತಾರಾ ಅವರಿಗೆ ಲೇಡಿ ಸೂಪರ್ ಸ್ಟಾರ್ ಎಂದು ಬಿರುದಿಟ್ಟು ಕರೆಯಲಾಗಿದೆ. ಬಾಲಿವುಡ್ ನ ಎವರ್ ಗ್ರೀನ್ ನಟಿ ಶ್ರೀದೇವಿ. ಹಾಗೆ ವಿಜಯಶಾಂತಿ, ಮಾಲಾಶ್ರೀಗೂ ಲೇಡಿ ಸೂಪರ್ ಸ್ಟಾರ್ ಎಂದು ಕರೆಯಲಾಗುತ್ತಿತ್ತು.
ಇನ್ನು ಬಹು ತಾರಾಗಣದ ಸೈರಾ ನರಸಿಂಹ ರೆಡ್ಡಿ ಸಿನಿಮಾ ಅಕ್ಟೋಬರ್​ನಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಸುದೀಪ್ ಅವರ ಪೈಲ್ವಾನ್ ಸೆಪ್ಟೆಂಬರ್ 12ರಂದು ಕನ್ನಡ, ಹಿಂದಿ, ತೆಲುಗು, ತಮಿಳು, ಮಲೆಯಾಳಂ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಸುದೀಪ್ ಕೋಟಿಗೊಬ್ಬ 3 ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...