ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ!

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ! ಆರೋಗ್ಯ ಕಾಪಾಡಿಕೊಳ್ಳುವುದು...

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ತೀವ್ರ ತಪಾಸಣೆ

ಮೈಸೂರು, ಬಾಗಲಕೋಟೆ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ತೀವ್ರ ತಪಾಸಣೆ ಮೈಸೂರು/ಬಾಗಲಕೋಟೆ: ಕಳೆದ...

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಗುಡ್ ಲಕ್: ಡಿಸಿಎಂ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಗುಡ್ ಲಕ್: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: “ಸಿದ್ದರಾಮಯ್ಯ...

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ, ಜನರ ಕೆಲಸ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು...