ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಯಶವಂತಪುರದ ಹೋಟೆಲ್ ತಾಜ್ ವಿವಾಂತದಲ್ಲಿರುವ ಶಾಸಕರೊಂದಿಗೆ ಸಿದ್ದರಾಮಯ್ಯ ಇಂದು ಮತ್ತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮುಂದಿನ ನಡೆ ಏನು? ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರು ಈಗಾಗಲೇ ಹೋಟೆಲ್ ತಾಜ್ ಗೆ ಆಗಮಿಸಿದ್ದಾರೆ.

ಒಂದು ವೇಳೆ ಸುಪ್ರೀಂಕೋರ್ಟ್ ಅತೃಪ್ತ ಶಾಸಕರ ಪರವಾಗಿ ತೀರ್ಪು ನೀಡಿದರೆ, ಬಿಜೆಪಿ ಮತ್ತೆ ಆಪರೇಷನ್ ಕಮಲ ನಡೆಸುವ ಸಾಧ್ಯತೆ ಇದೆ.ಹೀಗಾಗಿ ನಗರದಲ್ಲಿರುವ ಶಾಸಕರನ್ನು ಬೇರೆಡೆ ಸ್ಥಳಾಂತರ ಮಾಡಲು ಕಾಂಗ್ರೆಸ್ ಶಾಸಕರು ಮುಂದಾಗಿದ್ದಾರೆ ಎನ್ನಲಾಗಿದೆ.






