ಸುಪ್ರೀಂ ಕೋರ್ಟ್ ಜಾಮೀನು ರದ್ದು: ನಟ ದರ್ಶನ್ ಬಂಧನ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಅವರ ಫ್ಲ್ಯಾಟ್‌ನಲ್ಲಿ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಸುಪ್ರೀಂ ಕೋರ್ಟ್ ಆದೇಶ ಹೊರಬಂದ ಸಮಯದಲ್ಲಿ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಜಾತ್ರೆಯಲ್ಲಿ ಭಾಗವಹಿಸಿ ಫಾರ್ಮ್‌ಹೌಸ್‌ಗಾಗಿ ಕುದುರೆ ಖರೀದಿಸಲು ತೆರಳಿದ್ದ ಅವರು, ಅಲ್ಲಿ ಎರಡು ಕುದುರೆಗಳನ್ನು ಫೈನಲ್ ಮಾಡಿದ್ದರು.
ಜಾತ್ರೆಯಲ್ಲಿರುವಾಗಲೇ ಸ್ನೇಹಿತ ಧನ್ವೀರ್ ದೂರವಾಣಿ ಮೂಲಕ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮಾಹಿತಿ ನೀಡಿದ ನಂತರ ದರ್ಶನ್ ಬೆಂಗಳೂರಿಗೆ ಮರಳಿದರು. ಮನೆಗೆ ಆಗಮಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ಬಂಧಿಸಿದ್ದಾರೆ.