15 ವರ್ಷಗಳ ಹಿಂದೆ ಧರಂ ಸಿಂಗ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಆಗಿದ್ದಾಗ ಕುಕ್ಕೆಗೆ ಚಿನ್ನದ ರಥ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ ಅವತ್ತು ಸುಬ್ರಹ್ಮಣ್ಯನಿಗೆ ಹೇಳಿದ ಹರಕೆ ಇದುವರೆಗೂ ಪೂರ್ಣಗೊಂಡಿಲ್ಲ.ಈ ಹರಕೆಯನ್ನು ಈಡೇರಿಸಿಲ್ಲ ಅಂದರೆ ಸುಬ್ರಹ್ಮಣ್ಯನ ಶಾಪ ತಟ್ಟುತ್ತದೆ. ಸಿಎಂ ಸ್ಥಾನದಲ್ಲಿ ಇರುವವರು ಇದನ್ನು ನೆರವೇರಿಸಬೇಕು. ಇಲ್ಲದಿದ್ದರೆ ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಹರಕೆಯನ್ನು ಈಡೇರಿಸುವಂತೆ ಇತ್ತೀಚೆಗಷ್ಟೇ ಜ್ಯೋತಿಷಿ ದ್ವಾರಕನಾಥ್ ಸಿಎಂ ಕುಮಾರಸ್ವಾಮಿಗೆ ಹೇಳಿದ್ದರು.
ಕುಮಾರಸ್ವಾಮಿನೆಮ್ಮದಿಯಾಗಿ ಸರ್ಕಾರ ನಡೆಸಲು ಹಾಗೂ ಮಂಡ್ಯದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಇದೀಗ ಸುಬ್ರಹ್ಮಣ್ಯನಿಗೆ ಇನ್ನೂರು ಕೋಟಿ ರೂಪಾಯಿ ಮೊತ್ತದ ಚಿನ್ನದ ರಥ ಮಾಡಿಸುವಂತೆ ಮುಜರಾಯಿ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸುಬ್ರಹ್ಮಣ್ಯ ಸ್ವಾಮಿಗೆ ಬಂಗಾರದ ರಥ ನೀಡಲು ಮುಂದಾದ ಸಿಎಂ ಕುಮಾರಸ್ವಾಮಿ !?
Date: