‘ಸುಮಲತಾ , ಬಿಜೆಪಿ ಅಭ್ಯರ್ಥಿ” ಪಕ್ಷೇತರ ಅಭ್ಯರ್ಥಿ ಅಲ್ಲ, !

Must read

‘ಮಂಡ್ಯದಲ್ಲಿ ಬಿಜೆಪಿಯವರು ಸುಮಲತಾ ಅಂಬರೀಶ್ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಹಾಗಾಗಿ ಸುಮಲತಾ ಪಕ್ಷೇತರ ಅಭ್ಯರ್ಥಿಯಲ್ಲ, ಬದಲಾಗಿ ಬಿಜೆಪಿ ಅಭ್ಯರ್ಥಿ.

ಹೀಗಾಗಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅವರನ್ನು ಸಂಪೂರ್ಣ ವಿರೋಧಿಸಬೇಕು. ಒಂದು ವೇಳೆ ಯಾರಾದರೂ ಬೆಂಬಲಿಸಿದರೆ ಭವಿಷ್ಯದಲ್ಲಿ ತಕ್ಕ ಪರಿಣಾಮ ಅನುಭವಿಸಬೇಕಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಡೆದ ಟ್ವೀಟರ್ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸುಮಲತಾ ಅಂಬರೀಶ್ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂದು ಬಿಜೆಪಿಯವರು ತಮ್ಮ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಸಹಿತ ಪ್ರಕಟಿಸಿದ್ದಾರೆ.

- Advertisement -spot_img

More articles

- Advertisement -spot_img

Latest article