ಮಂಡ್ಯ ಲೋಕಸಭಾ ಚುನಾವಣೆ ಮತ್ತಷ್ಟು ರಂಗೇರಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಸುಮಲತಾ ಅವರ ಮೆರವಣಿಗೆ ನಡೆಯುತ್ತಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಬೃಹತ್ ಸಮಾವೇಶ ನಡೆಯಲಿರುವ ಸಿಲ್ವರ್ ಜ್ಯುಬಿಲಿ ಪಾರ್ಕ್ನತ್ತ ಮೆರವಣಿಗೆ ಹೊರಟಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಸಾಥ್ ನೀಡಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಸುದ್ದಿಗೋಷ್ಠಿಯಲ್ಲೂ ಸುಮಲತಾ ಅವರೊಡನೆ ಇದ್ದ ದರ್ಶನ್ ಹಾಗೂ ಯಶ್ ಇಂದು ರ್ಯಾಲಿಯಲ್ಲೂ ಬೆಂಬಲ ನೀಡಿದ್ದಾರೆ. ಬೃಹತ್ ಸಮಾವೇಶದಲ್ಲೂ ಜೊತೆಗಿರುತ್ತಾರೆ.
ದರ್ಶನ್ ಮತ್ತು ಯಶ್ ಸುಮಲತಾ ಪರ ಪ್ರಚಾರಕ್ಕೆ ನಿಂತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಅದಕ್ಕೆ ತಲೆ ಕೆಡಿಸಿಕೊಳ್ಳದೆ ಇಬ್ಬರು ಸ್ಟಾರ್ ನಟರೂ ಮನೆ ಮಕ್ಕಳಂತೆ ಸುಮಲತಾಗೆ ಜೋಡೆತ್ತುಗಳಾಗಿ ಪ್ರಚಾರಕ್ಕೆ ನಿಂತಿದ್ದಾರೆ.
ಸುಮಲತಾ ರ್ಯಾಲಿಯಲ್ಲೂ ಜೊತೆಗೂಡಿದ ದರ್ಶನ್, ಯಶ್
Date: