ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಪ್ರಬಲ ಪೈಪೋಟಿ ಇದೆ. ಗೆಲ್ಲಲು ಇಬ್ಬರೂ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ಈ ನಡುವೆ ಕಾಂಗ್ರೆಸ್ ಸುಮಲತಾ ವಿರುದ್ಧ ದೂರು ದಾಖಲಿಸಿದೆ. ಪ್ರಚಾರಕ್ಕೆ ಕಾಂಗ್ರೆಸ್ ಬಾವುಟ ಬಳಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಸುಮಲತಾ ಅವರು ಪ್ರಚಾರದ ವೇಳೆ ಕಾಂಗ್ರೆಸ್ ಬಾವುಟ ಬಳಸಿರುವುದು ಕಾನೂನು ಬಾಹಿರವಾಗಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆಯಾದ ಹಿನ್ನಲೆಯಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪ್ರಚಾರ ಮಾಡುತ್ತಿದ್ದಾರೆ.
ಸುಮಲತಾ ವಿರುದ್ಧ ದೂರು ದಾಖಲು !
Date: