ಲೋಕಸಭೆ ಚುನಾವಣೆಯ ಮತದಾನದ ವೇಳೆ ಚುನಾವಣಾ ಸಿಬ್ಬಂದಿಯೊಬ್ಬರು ಸೂಪರ್ಸ್ಟಾರ್ ರಜನಿಕಾಂತ್ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ,
ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಿತ್ತು ಆದರೆ ಇದೀಗ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ, ಸ್ಟೆಲ್ಲಾ ಮೇರಿಸ್ ಕಾಲೇಜಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ.
ರಜನಿಕಾಂತ್ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡು ರಾಜ್ಯ ಚುನಾವಣಾ ಆಯುಕ್ತ ಸತ್ಯಬಾತ್ರ ಸಾಹೋ, ಹೌದು ,ತಪ್ಪಾಗಿದೆ, ಚುನಾವಣಾ ಅಧಿಕಾರಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಾಗಿತ್ತು ಎಂದಿದ್ದಾರೆ
ಅಲ್ಲದೆ ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ತಪ್ಪೆಸಗಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.