No menu items!
9.3 C
Munich
Wednesday, April 29, 2026

ಸೂಪರ್ ಸ್ಟಾರ್ ರಜನಿಕಾಂತ್ ವಿಷಯದಲ್ಲಿ ಆಟವಾಡಿದ ಚುನಾವಣಾ ಆಯೋಗ..!?

Must read

ಲೋಕಸಭೆ ಚುನಾವಣೆಯ ಮತದಾನದ ವೇಳೆ ಚುನಾವಣಾ ಸಿಬ್ಬಂದಿಯೊಬ್ಬರು ಸೂಪರ್​ಸ್ಟಾರ್​ ರಜನಿಕಾಂತ್ ​ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ,

ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಿತ್ತು ಆದರೆ ಇದೀಗ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ, ಸ್ಟೆಲ್ಲಾ ಮೇರಿಸ್ ಕಾಲೇಜಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ.

ರಜನಿಕಾಂತ್​ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡು ರಾಜ್ಯ ಚುನಾವಣಾ ಆಯುಕ್ತ ಸತ್ಯಬಾತ್ರ ಸಾಹೋ, ಹೌದು ,ತಪ್ಪಾಗಿದೆ, ಚುನಾವಣಾ ಅಧಿಕಾರಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಾಗಿತ್ತು ಎಂದಿದ್ದಾರೆ

ಅಲ್ಲದೆ ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ತಪ್ಪೆಸಗಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article