ಸೂಪರ್ ಹೀರೋ ಕಾನ್ಸೆಪ್ಟ್ ಸಿನಿಮಾಗೆ ಶಿವಣ್ಣ ಫಿದಾ !

Date:

ಸೂಪರ್ ಹೀರೋ ಕಾನ್ಸೆಪ್ಟ್‌ ಹೊಂದಿರುವ ಹನು-ಮಾನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೇಜ ಸಜ್ಜಾ, ವರಲಕ್ಷ್ಮೀ ಶರತ್ ಕುಮಾರ್, ಕನ್ನಡದವರೇ ಆದ ಅಮೃತಾ ಐಯ್ಯರ್, ದೀಪಕ್ ಶೆಟ್ಟಿ ನಟಿಸಿರುವ ಈ ಚಿತ್ರಕ್ಕೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳಿಗೆ ಟಕ್ಕರ್ ಕೊಡುತ್ತಿರುವ ಹನು-ಮಾನ್ ಚಿತ್ರವನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿನ್ನೆ ವೀಕ್ಷಿಸಿದ್ದಾರೆ.

ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಪತ್ನಿ,‌ಮಗಳೊಟ್ಟಿಗೆ ಹನು-ಮಾನ್ ಸಿನಿಮಾ ನೋಡಿದ ಶಿವಣ್ಣನಿಗೆ ತೇಜ್ ಸಜ್ಜಾ ಹಾಗೂ ಅಮೃತಾ ಸಾಥ್ ಕೊಟ್ಟರು. ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ಹನುಮಾನ್ ಸಿನಿಮಾವನ್ನು ಮೈಂಡ್ ಬ್ಲೋಯಿಂಗ್ ಚಿತ್ರ ಎಂದರು. ತೇಜ ಸಜ್ಜಾ, ಅಮೃತಾ, ವರಲಕ್ಷ್ಮೀ ಅಭಿನಯವನ್ನು ಕೊಂಡಾಡಿದರು.


ಕಟ್ಟರ್ ಹಿಂದೂ ವಾದಿ ಎನಿಸಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರನ್ನು ತೇಜ ಸಜ್ಜಾ ನಿನ್ನೆ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ. ಇದೊಂದು ಆತ್ಮೀಯ ಭೇಟಿಯಾಗಿದ್ದು, ಹನುಮಾನ್ ಸಿನಿಮಾ ಶೀಘ್ರದಲ್ಲಿಯೇ ವೀಕ್ಷಿಸುವುದಾಗಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಸುಗ್ಗಿ ಸಂಭ್ರಮದ ವಿಶೇಷವಾಗಿ ಬಿಡುಗಡೆಯಾದ ಹನು-ಮಾನ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈಗಾಗಲೇ ನೂರು ಕೋಟಿ ಬಾಚಿಕೊಂಡಿರುವ ತೇಜ ಸಜ್ಜಾ ಚಿತ್ರ ಸ್ಟಾರ್ ಹೀರೋ ಚಿತ್ರಗಳಿಗೆ ಟಕ್ಕರ್ ಕೊಟ್ಟು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿಯಾಗಿ ಓಟ ಮುಂದುವರೆಸಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...