ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾ

0 Min Read

ಬೆಂಗಳೂರು : ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಈ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

Share This Article