ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಸೆಪ್ಟೆಂಬರ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಕೆಲವೆಡೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ, ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಾತ್ರ ಜುಲೈ ತಿಂಗಳಂತೆ ಆಗಸ್ಟ್ ತಿಂಗಳಲ್ಲೂ ಕಡಿಮೆ ರಜೆ ದಿನಗಳಿತ್ತು. ಆದರೆ, ಸೆಪ್ಟೆಂಬರ್ ತಿಂಗಳಲ್ಲಿ ಹಬ್ಬದ ದೆಸೆಯಿಂದ ಹೆಚ್ಚಿನ ರಜೆ ನಿರೀಕ್ಷಿಸಲಾಗಿದೆ.
ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾ ದಿನವಿರಲಿದೆ.
ಪ್ರತಿ ವರ್ಷ ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ. ಗಮನಿಸಿ: ಕರ್ನಾಟಕದಲ್ಲಿ ಗಣೇಶ ಚತುರ್ಥಿಗೆ ಒಂದು ದಿನ ಮಾತ್ರ ರಜೆ ಲಭ್ಯವಾಗಲಿದೆ. ಮಿಕ್ಕಂತೆ ವಿವಿಧ ರಾಜ್ಯಗಳ ರಜಾ ದಿನಗಳ ಬಗ್ಗೆ ವಿವರ ಮುಂದಿದೆ.