ಸೆಪ್ಟೆಂಬರ್‌ 5ರಿಂದ ರಾಜ್ಯದ ಈ ಊರುಗಳಲ್ಲಿ ಭರ್ಜರಿ ಮಳೆ

0
33

ರಾಜ್ಯದಲ್ಲಿ ಸೆಪ್ಟೆಂಬರ್ 5 ರಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಕೋಲಾರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 3ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್‌ 3ರವರೆಗೆ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 1 ರಂದು ಎಲ್ಲಾ ಕಡೆ ಮಳೆಯಾಗಲಿದೆ ಎಂದು ಇಲಾಖೆಯು ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

ಮಂಗಳೂರು” ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಸೋಮವಾರ ಇಡೀ ದಿನ ನಿರಂತರ ಭಾರಿ ಮಳೆಯಾಗಿದೆ. ಸೆಪ್ಟೆಂಬರ್‌ 1ರ ತನಕ ಗಾಳಿಯೊಂದಿಗೆ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಉಡುಪಿ ಜಿಲ್ಲೆಯ ಕೋಟದಲ್ಲಿ ಎಂಟು ಸೆಂ.ಮೀ., ಸುಬ್ರಹ್ಮಣ್ಯ, ಕುಂದಾಪುರದಲ್ಲಿ ತಲಾ ಐದು ಸೆಂ.ಮೀ., ಮಾಣಿ, ಮೂಲ್ಕಿ, ಉಡುಪಿ, ಕೊಲ್ಲೂರಿನಲ್ಲಿ ತಲಾ ನಾಲ್ಕು ಸೆಂ.ಮೀ., ಮಂಗಳೂರು, ಪಣಂಬೂರು, ಧರ್ಮಸ್ಥಳ, ಸಿದ್ಧಾಪುರ, ಕಾರ್ಕಳ, ಬ್ರಹ್ಮಾವರದಲ್ಲಿ ತಲಾ ಮೂರು ಸೆಂ.ಮೀ. ಮಳೆಯಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಈ ಸಂದರ್ಭದಲ್ಲಿ ಕಲಬುರಗಿ, ಯಾದಗಿರಿ ಹಾಗೂ ಬೀದರ್‌ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸೆ.3ರಿಂದ 5ರವರೆಗೂ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ(SIK) ಮಳೆಯ ಪ್ರಮಾಣ ಹೆಚ್ಚಾಗಲಿದೆ.

 

ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ(SIK) ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಉಳಿದಂತೆ ಉತ್ತರ ಒಳನಾಡಿನಲ್ಲೂ(NIK) ಇಂದು ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಸುಬ್ರಹ್ಮಣ್ಯ, ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದೆ.

LEAVE A REPLY

Please enter your comment!
Please enter your name here