ಸೆಪ್ಟೆಂಬರ್ 07 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಬೆಂಗಳೂರು ನಗರ ಸಿದ್ಧವಾಗುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಗರದಾದ್ಯಂತ ಗಣಪತಿ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಶನಿವಾರ ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಶನಿವಾರ ಗಣೇಶ ಚರುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿ ಕೂಡ ನೀಡಲಾಗಿದೆ.