ಸೆಪ್ಟೆಂಬರ್ 24ರ ತನಕ ಈ ಜಿಲ್ಲೆಗಳಲ್ಲಿ ಭಾರೀ ಮಳೆ

0
33

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದೆ. ಬುಧವಾರ ಸಹ ಮೋಡ ಕವಿದ ವಾತಾವರಣವಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಿಲ್ಲ.

ಬೆಂಗಳೂರು ನಗರದಲ್ಲಿ ಮಂಗಳವಾರವೂ ಮಧ್ಯಾಹ್ನ ಮತ್ತು ಸಂಜೆ ಉತ್ತಮ ಮಳೆಯಾಗಿದೆ. ಸೆಪ್ಟೆಂಬರ್ 24ರ ತನಕ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 17 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬೇಕಿತ್ತು. ಆದರೆ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಮಳೆ ಮುಂದುವರೆದಿದೆ. ಈ ತಿಂಗಳಿನಲ್ಲಿ ವಾಡಿಕೆಗಿಂತ ಶೇ 27ರಷ್ಟು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷಿಸಿದೆ.

LEAVE A REPLY

Please enter your comment!
Please enter your name here