ಸೆಮಿಫೈನಲ್ ಪಂದ್ಯದಲ್ಲಿ ಭಾರತ – ಆಸ್ಟ್ರೇಲಿಯಾ ಕಾದಾಟ! ಎಷ್ಟು ಗಂಟೆಗೆ ಆರಂಭ?,

Date:

ಸೆಮಿಫೈನಲ್ ಪಂದ್ಯದಲ್ಲಿ ಭಾರತ – ಆಸ್ಟ್ರೇಲಿಯಾ ಕಾದಾಟ! ಎಷ್ಟು ಗಂಟೆಗೆ ಆರಂಭ?, ಉಚಿತವಾಗಿ ವೀಕ್ಷಿಸುವುದು ಹೇಗೆ? ಇಲ್ಲಿದೆ ಪೂರ್ಣ ವಿವರ

2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಅಂದರೆ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಚಾಂಪಿಯನ್ಸ್ ಟ್ರೋಫಿಯಲ್ಲಿ ದುಬೈನಲ್ಲಿ ನಡೆದ ಕಳೆದ 3 ಪಂದ್ಯಗಳಲ್ಲಿ ಸ್ಪಿನ್ನರ್‌ಗಳ ಪ್ರಾಬಲ್ಯ ಕಂಡುಬಂದಿದೆ. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಆಟದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ,
ಆದಾಗ್ಯೂ, ತಂಡಗಳು ಗುರಿಗಳನ್ನು ಬೆನ್ನಟ್ಟುವಾಗ ಪರಿಸ್ಥಿತಿ ಸ್ವಲ್ಪ ಉತ್ತಮವಾಗಿ ಕಾಣುತ್ತದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತದ ಸ್ಪಿನ್ನರ್‌ಗಳು ಇಲ್ಲಿ 9 ವಿಕೆಟ್‌ಗಳನ್ನು ಕಬಳಿಸಿದ್ದರು. ಹೀಗಾಗಿ ಸೆಮಿಫೈನಲ್‌ನಲ್ಲೂ ಸ್ಪಿನ್ನರ್‌ಗಳ ಪ್ರಾಬಲ್ಯವನ್ನು ಕಾಣಬಹುದು. ದುಬೈನಲ್ಲಿ 270 ಕ್ಕಿಂತ ಹೆಚ್ಚು ರನ್ಗಳನ್ನು ಬೆನ್ನಟ್ಟುವುದು ಸುಲಭವಲ್ಲ. ಈ ಮೈದಾನವು ರನ್ ಚೇಸ್‌ಗೆ ಹೆಸರುವಾಸಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ದುಬೈನಲ್ಲಿ ಟಾಸ್ ಗೆದ್ದ ತಂಡವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಯಾವಾಗ ನಡೆಯಲ್ಲಿದೆ?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಮಾರ್ಚ್ 4 ರ ಮಂಗಳವಾರದಂದು ನಡೆಯಲ್ಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಎಲ್ಲಿ ನಡೆಯಲ್ಲಿದೆ?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ದುಬೈನ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಪಂದ್ಯದ ಟಾಸ್ 2 ಗಂಟೆಗೆ ನಡೆಯಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....