ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಮೋತಕ ಪಲ್ಲಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಸೇಡಂ ಶಾಸಕರಾಗಿ ಸೇವೆ ಸಲ್ಲಿಸಿದ ಬಸವಂತ ರೆಡ್ಡಿ ಪಾಟೀಲರು ಸರಳ ಸಜ್ಜನ ರಾಜಕಾರಣಿ ಯಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೋತಕಪಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.ಬಸವಂತರೆಡ್ಡಿ ಪಾಟೀಲ್ ಎರಡು ಬಾರಿ ಶಾಸಕರಾಗಿದ್ದರು.ಮೃತರ ಅಂತ್ಯಕ್ರಿಯೆ ಮೋತಕಪಲ್ಲಿ ಗ್ರಾಮದ ಸ್ವಂತ ಜಮೀನಿನಲ್ಲಿ ಅಪರಾಹ್ನ 3 ಗಂಟೆಗೆ ನೆರೆವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.