ಸೈಫ್ ಅಲಿ ಖಾನ್ ಪ್ರಕರಣ: ಓರ್ವ ಶಂಕಿತ ಆರೋಪಿ ಅರೆಸ್ಟ್!
ನವದೆಹಲಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಘಟನೆ ಸಂಬಂಧ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗಾಗಿ ಬಾಂದ್ರಾ ಪೊಲೀಸ್ ಠಾಣೆಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರಾ ವೆಸ್ಟ್ ಪ್ರದೇಶದಲ್ಲಿ ನಟ ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ಕಳ್ಳತನ ಯತ್ನದ ತನಿಖೆ ಗುರುವಾರದಿಂದ ಹಲವು ತಿರುವುಗಳನ್ನು ಕಂಡಿದೆ. ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ