ಉಪಚುನಾವಣೆ ಮುಗಿದ ನಂತರ ರಾಜ್ಯದ ರಾಜಕೀಯದಲ್ಲಿ ಯಾರಿಗೆ ಯಾವ ಸ್ಥಾನ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ ಆದರೆ ಈ ವಿಚಾರದ ಬಗ್ಗೆ ಗುಪ್ತವಾಗಿ ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಅವರೊಡನೆ ಮಾತುಕತೆ ಮಾಡಿದ್ದಾರೆಂದು ಹೇಳಲಾಗುತ್ತಿದೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಉಪ ಮುಖ್ಯಮಂತ್ರಿ ಸ್ಥಾನಗಳು ರದ್ದಾಗಬೇಕೆಂಬುದು ನನ್ನ ಅಭಿಪ್ರಾಯ. ಪಕ್ಷದ ಹಲವು ಶಾಸಕರು, ಜನರ ಅಭಿಪ್ರಾಯವೂ ಇದೇ ಆಗಿದೆ. ನಾನು ಈ ಕುರಿತು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ರೇಣುಕಾಚಾರ್ಯ ಅವರು ಹೇಳಿದ್ದಾರೆ.
ಇನ್ನು ಇದೇ ವೇಳೆ ಶಾಸಕರಿಗೆ ನೀಡುವ ಸ್ಥಾನಮಾನ ನೀಡುವ ವಿಚಾರವೂ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಅನರ್ಹ ಶಾಸಕರಿಗೆ ನೀಡಿದ್ದ ಭರವಸೆ ಕುರಿತು ಮಾತನಾಡಿರುವ ರೇಣುಕಾಚಾರ್ಯ, ಸೋತವರಿಗೂ ಮಂತ್ರಿ ಸ್ಥಾನ ನೀಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಅವರು ಮಾಡಿದ್ದಾರೆ ಎನ್ನಲಾಗುತ್ತಿದೆ.