ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂತರ ಪಕ್ಷದ ಪ್ರಬಲ ಬೆಂಬಲಿಗರಾಗಿರುವ ಲಿಂಗಾಯತ ಸಮುದಾಯವನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ಗಂಭೀರವಾಗಿ ಆಲೋಚನೆ ನಡೆಸಿರುವ ಬಿಜೆಪಿ ಹೈಕಮಾಂಡ್ ಪರ್ಯಾಯ ನಾಯಕನಾಗಿ ಜಗದೀಶ್ ಶೆಟ್ಟರ್ ಅವರನ್ನು ಒಪ್ಪಿಕೊಳ್ಳುತಿರಲಿಲ್ಲ .
ಹಾಗಾಗಿ ಕೂಲಂಕಷವಾಗಿ ಪರಿಶೀಲಿಸಿದ ನಂತರ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟುಕೆಲಸ ಮಾಡಿರುವ ಹಾಗೂ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಲಕ್ಷ್ಮಣ ಸವದಿ ಅವರು ಮುಂದಿನ ಪರ್ಯಾಯ ಲಿಂಗಾಯತ ನಾಯಕರಾಗಿ ಬೆಳೆಯುವ ಸಾಮರ್ಥ್ಯ ಹೊಂದಿದ್ದಾರೆ ಹಾಗೂ ಡಿಸಿಎಂ ಹುದ್ದೆಗೆ ಸರಿಯಾದ ವ್ಯಕ್ತಿ ಎಂಬ ನಿಲುವಿಗೆ ಬಿಜೆಪಿ ಹೈಕಮಾಂಡ್ ಬಂದಿದೆ .