ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಎರಡನೇ ಸುತ್ತಿನಲ್ಲೂ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಲಖನ್ ಜಾರಕಿಹೊಳಿ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳಿಸಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿಯವರನ್ನು ಪರಾಭವಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದರೂ ಅದರು ಸಹೋದರನ ವಿರುದ್ಧ ವೈಯಕ್ತಿಕ ವರ್ಚಸ್ಸಿನಿಂದ ರಮೇಶ್ ಜಾರಕಿಹೊಳಿ ಮುನ್ನಡೆ ಸಾಧಿಸುತ್ತಿದ್ದಾರೆ. ಗೆಲುವನ್ನು ಪರಕಟಿಸುವುದು ಬಾಕಿ ಇದೆ ಅಷ್ಟೇ ಆದರೆ ಬಹುತೇಕ ಗೆಲುವು ಕಚಿತ ಆಗಿದೆ ಎಂದು ಹೇಳಲಾಗುತ್ತಿದೆ.