ಸೋಮವಾರ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ !

Date:

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.
ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು, ಪೆಟ್ರೋಲ್ ದರ ಪ್ರತಿ ಲೀಟರ್ಗೆ 3 ರೂ., ಡೀಸೆಲ್ ದರ 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ. ಎಂದು ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳು ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ಸೋಮವಾರ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...