ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಾರಥ್ಯ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಮೈತ್ರಿ ಆಡಳಿತವಿದ್ದರೂ 28 ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾದ ಕಾಂಗ್ರೆಸ್ ಪಕ್ಷ ಈಗ ಪಕ್ಷವನ್ನು ಪುನಃ ಸಂಘಟಿಸಲು ಮುಂದಾಗಿದೆ.
ಮುಂಬರುವ ಚುನಾವಣೆಗಳನ್ನು ಎದುರಿಸಲು ಸಮರ್ಥ ನಾಯಕನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು ಕೆಪಿಸಿಸಿ ಅಧ್ಯಕ್ಷವನ್ನು ಬದಲಾವಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಈ ಹೊಣೆ ಹೊರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈವರೆಗೆ ಹೈಕಮಾಂಡ್ ವಹಿಸಿರುವ ಎಲ್ಲಾ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ ಯಶಸ್ವಿಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಧ್ಯಕ್ಷ ಪಟ್ಟ ನೀಡುವುದರಿಂದ ಪ್ರಭಾವಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಬೆನ್ನಿಗೆ ನಿಲ್ಲುತ್ತದೆ ಎಂಬ ಲೆಕ್ಕಾಚಾರ ಹೈಕಮಾಂಡ್‍ನದ್ದಾಗಿದೆ.