ಸೋಷಿಯಲ್ ಮೀಡಿಯಾಗೆ ಮತ್ತೆ ಎಂಟ್ರಿ ಕೊಡ್ತಿದ್ದಾರೆ..!

Date:

ಸೋಷಿಯಲ್ ಮೀಡಿಯಾಗೆ ಮತ್ತೆ ಎಂಟ್ರಿ ಕೊಡ್ತಿದ್ದಾರೆ..! ಅವನೇ ಶ್ರಿಮನ್ನಾರಾಯಣ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಸುಮಾರು ತಿಂಗಳುಗಳಿಂದ ಸದ್ದು ಸುದ್ದಿಯಿಲ್ಲದೆ ಸೈಲೆಂಟ್ ಆಗಿ ಚಿತ್ರೀಕರಣದಲ್ಲಿ ನಿರತರಾಗಿದ್ದ ಕಿರಿಕ್ ಸ್ಟಾರ್ ಈಗ ಅಭಿಮಾನಿಗಳಿಗೊಂದು ಸಂತಸದ ಸುದ್ದಿ ನೀಡಿದ್ದಾರೆ. ಹೌದು, ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಇರುವ ರಕ್ಷಿತ್ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ರಕ್ಷಿತ್ ಹುಟ್ಟುಹಬ್ಬ ಕೂಡ ಹತ್ತಿರ ಬರ್ತಿದೆ. ಸಿಂಪಲ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣಕ್ಕೆ ಮತ್ತೆ ವಾಪಸ್ ಬರುವ ಮನಸ್ಸು ಮಾಡಿದ್ದಾರಂತೆ.
ಸೋಷಿಯಲ್ ಮೀಡಿಯಾದಿಂದ ದೂರ ಸರಿದಿದ್ದ ನಟ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದರು. ತಮ್ಮ ವೈಯಕ್ತಿಕ ಹಾಗೂ ಸಿನಿಮಾ ವಿಚಾರಗಳನ್ನು ಅದರಲ್ಲಿ ಹಂಚಿಕೊಳ್ಳುತ್ತಿದ್ದರು. ಎಲ್ಲರಂತೆ, ಪ್ರತಿ ದಿನ ಸೋಷಿಯಲ್ ಮೀಡಿಯಾ ಬಳಕೆ ಮಾಡುತ್ತಿದ್ದ ರಕ್ಷಿತ್ ಕಳೆದ ವರ್ಷ ದೂರ ಸರಿದ್ದಿದ್ದರು. ಕಾರಣ ಹೇಳದೆ ಟ್ವಿಟ್ಟರ್ ಫೇಸ್ ಬುಕ್ ಖಾತೆಗಳನ್ನು ಡಿಲಿಟ್ ಮಾಡಿದ್ದರು. ಆದ್ರೆ ಅವರ ವೈಯಕ್ತಿಕ ಜೀವನದಲ್ಲಾದ ಕೆಲವು ಬೆಳವಣಿಗೆಗಳು ಸೋಷಿಯಲ್ ಮೀಡಿಯಾ ಬಿಡಲು ಕಾರಣ ಎಂದು ಹೇಳಲಾಗುತ್ತಿತ್ತು.
ಸುಮಾರು ವರ್ಷದಿಂದ ಅಭಿಮಾನಿಗಳ ಕೈಗೆ ಸಿಗದೆ ದೂರ ಉಳಿದಿದ್ದ ರಕ್ಷಿತ್ ಇನ್ಮುಂದೆ ಅಭಿಮಾನಿಗಳ ಜೊತೆ ನೇರ ಸಂದರ್ಶನದಲ್ಲಿ ಭಾಗಿಯಾಗಲಿದ್ದಾರೆ. ಜೂನ್ 6ಕ್ಕೆ ರಕ್ಷಿತ್ ಹುಟ್ಟುಹಬ್ಬ ಇದೇ ತಿಂಗಳು ಜೂನ್ 6ಕ್ಕೆ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ಈಗಾಗಲೆ ರಕ್ಷಿತ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಸಾಕಷ್ಟು ಗಿಫ್ಟ್ ಗಳು ಕಾದಿವೆ. ಸದ್ಯ ರಕ್ಷಿತ್ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಈ ಸಿನಿಮಾಗಳ ಟ್ರೈಲರ್, ಟೀಸರ್ ಮತ್ತು ಫಸ್ಟ್ ಲುಕ್ ತೆರೆಗೆ ಬರುವ ಸಾಧ್ಯತೆಗಳಿವೆ. ಜೂನ್ 6ಕ್ಕೆ ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ರಕ್ಷಿತ್ ಶೆಟ್ಟಿ ಸೋಷಿಯಲ್ ಮೀಡಿಯಾದಿಂದ ದೂರ ಸರಿದಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿತ್ತು. ರಕ್ಷಿತ್ ದಿಢೀರನೆ ಸಾಮಾಜಿಕ ಜಾಲತಾಣದಿಂದ ದೂರ ಹೋಗಿದ್ರು. ಆದ್ರೀಗ ಹುಟ್ಟುಹಬ್ಬದ ದಿನ ಮತ್ತೆ ಸಾಮಾಜಿಕ ಜಾಲತಾಣಕ್ಕೆ ಮರಳುತ್ತಿದ್ದಾರೆ. ಈ ಮೂಲಕ ಮುಂದಿನ ಸಿನಿಮಾಗಳ ಮಾಹಿತಿ ನೀಡಲಿದ್ದಾರೆ. ಟ್ವಿಟ್ಟರ್, ಇನ್ಸ್ಟಾ ಗ್ರಾಮ್, ಫೇಸ್ ಬುಕ್ ಎಲ್ಲ ಕಡೆ ರಕ್ಷಿತ್ ಶೆಟ್ಟಿ ಪೇಜ್ ತೆರೆಯಲಿದೆ. ಇದು ಅವರ ಅಭಿಮಾನಿಳಿದ ಸಖತ್ ಖುಷಿ ತಂದಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...