ಮಾಧ್ಯಮದವರೊಡನೆ ಸೌಮ್ಯ ರೆಡ್ಡಿ ವಿಚಾರ ಮಾತನಾಡಿದ ಡಿ ಕೆ ಶಿವಕುಮಾರ್ ಅವರು ಸೌಮ್ಯಾ ರೆಡ್ಡಿ ಅವರನ್ನು ಬಂಧಿಸಿದರೂ ನಾವು ಅವರ ಪರ ನಿಲ್ಲುತ್ತೇವೆ. ನಮ್ಮ ಬಳಿಯೂ ಸಾಕ್ಷ್ಯಗಳಿವೆ. ನಾವು ಅದನ್ನು ಮುಂದಿಡುತ್ತೇವೆ. ಆಕೆ ಕೆಳಗೆ ಬಿದ್ದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ, ನನಗೆ ಬೇರೆ ಯಾರ ಸಾಕ್ಷಿಯೂ ಬೇಡ. ಈ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ. ಸರ್ಕಾರ ಹೇಳದೆ ಯಾವ ಎಫ್ ಐಆರ್ ಹಾಕಲು ಸಾಧ್ಯವಿಲ್ಲ. ಪೊಲೀಸರ ದಬ್ಬಾಳಿಕೆ ವೇಳೆ ಸ್ವಯಂ ರಕ್ಷಣೆ ಮಾಡಿಕೊಳ್ಳುವುದು ಆಕೆಯ ಹಕ್ಕು.
ಈ ಕೇಸ್ ಬರಲಿ ನಾವು ಎದುರಿಸಲು ಸಿದ್ಧ ಎಂದು ಹೇಳಿದರುಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ವೈಯಕ್ತಿಕ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪೊಲೀಸರು ಎಲ್ಲ ಮಹಿಳಾ ನಾಯಕಿಯರನ್ನು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ. ಇನ್ನು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಅವರ ಬಟ್ಟೆ ಬಿಚ್ಚಿಸಿ ದೌರ್ಜನ್ಯ ಎಸಗಿದ್ದಾರೆಎಂದು ಡಿ ಕೆ ಶಿವಕುಮಾರ್ ಅವರು ಸೌಮ್ಯ ರೆಡ್ಡಿ ಪರ ಮಾತನಾಡುದರು.