ಸ್ಕಾಟ್ಲೆಂಡ್ ವಿರುದ್ಧ ಗೆದ್ದು ಪಾಕಿಸ್ತಾನವನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿದ ಅಫ್ಘಾನ್

Date:

ಪ್ರಸಕ್ತ ಸಾಲಿನ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಇಂದು ( ಅಕ್ಟೋಬರ್ 25 ) ಅಫ್ಘಾನಿಸ್ಥಾನ ಮತ್ತು ಸ್ಕಾಟ್ಲೆಂಡ್ ತಂಡಗಳು ಸೆಣಸಾಟ ನಡೆಸಿವೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶಿಸಿರುವ ಸ್ಕಾಟ್ಲೆಂಡ್ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ಈ ಪಂದ್ಯದಲ್ಲಿ ಹೀನಾಯ ಸೋಲನ್ನು ಕಂಡಿದೆ.


ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನದ ಪರ ಆರಂಭಿಕ ಆಟಗಾರರಾದ ಹಜರತುಲ್ಲಾ ಝಜೈ 30 ಎಸೆತಗಳಲ್ಲಿ 44 ರನ್ ಮತ್ತು ಮೊಹಮ್ಮದ್ ಶಹಜಾದ್ 15 ಎಸೆತಗಳಲ್ಲಿ 22 ರನ್ ಬಾರಿಸುವ ಮೂಲಕ ಉತ್ತಮ ಆರಂಭವನ್ನು ನೀಡಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಜ್ 37 ಎಸೆತಗಳಲ್ಲಿ 46, ನಜೀಬುಲ್ಲಾ ಜದ್ರಾನ್ 34 ಎಸೆತಗಳಲ್ಲಿ 59 ಮತ್ತು ಮೊಹಮ್ಮದ್ ನಬಿ 4 ಎಸೆತಗಳಲ್ಲಿ ಅಜೇಯ 11 ರನ್ ಕಲೆ ಹಾಕಿದರು. ಈ ಮೂಲಕ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸುವುದರ ಮೂಲಕ ಎದುರಾಳಿ ಸ್ಕಾಟ್ಲೆಂಡ್ ತಂಡಕ್ಕೆ 191 ರನ್‌ಗಳ ಗುರಿಯನ್ನು ನೀಡಿತು.

ಸ್ಕಾಟ್ಲೆಂಡ್ ತಂಡದ ಪರ ಶಫ್ಯಾನ್ ಷರೀಫ್ 2 ವಿಕೆಟ್, ಜೋಶ್ ಡೇವಿ ಮತ್ತು ಮಾರ್ಕ್ ವ್ಯಾಟ್ ತಲಾ ಒಂದೊಂದು ವಿಕೆಟ್ ಪಡೆದರು. ಹೀಗೆ ಅಫ್ಘಾನಿಸ್ತಾನದ ವಿರುದ್ಧ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ ಸ್ಕಾಟ್ಲೆಂಡ್ ಬ್ಯಾಟಿಂಗ್‌ನಲ್ಲಿಯೂ ಹೀನಾಯ ಪ್ರದರ್ಶನವನ್ನು ನೀಡಿತು. ಅಫ್ಘಾನಿಸ್ತಾನ ನೀಡಿದ 191 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಸ್ಕಾಟ್ಲೆಂಡ್ 10.2 ಓವರ್‌ಗಳಲ್ಲಿಯೇ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು ಕೇವಲ 60 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ ಸ್ಕಾಟ್ಲೆಂಡ್ ವಿರುದ್ಧ 130 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿತು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...