ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು
ಮೈಸೂರು:ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟ ದುರಂತ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಡೆದ ಈ ಘಟನೆದಲ್ಲಿ ಗುಲ್ಫಾರ್ಮ್ (23) ಹಾಗೂ ಸಿಮ್ರಾನ್ ತಾಜ್ (20) ಎಂಬ ಸಹೋದರಿಯರು ಸಾವನ್ನಪ್ಪಿದ್ದಾರೆ.
ಮಾಹಿತಿಯ ಪ್ರಕಾರ, ಇಬ್ಬರೂ ಒಟ್ಟಿಗೆ ಸ್ನಾನಕ್ಕೆ ಹೋಗಿದ್ದು, ಬಹಳ ಸಮಯವಾದರೂ ಹೊರಗೆ ಬರದಿದ್ದರಿಂದ ತಂದೆ ಅಲ್ತಾಫ್ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯದ ಕಾರಣ ಬಲವಂತವಾಗಿ ಒಳಗೆ ಹೋಗಿ ನೋಡಿದಾಗ ಇಬ್ಬರೂ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದಾರೆ.
ತಕ್ಷಣ ಯುವತಿಯರನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವುದು ವೈದ್ಯರು ದೃಢಪಡಿಸಿದ್ದಾರೆ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.






