ಕರ್ನಾಟಕ ವಿಧಾನಮಂಡಲದ ಕಲಾಪ ಆರಂಭಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ ಅತೃಪ್ತ ಬಿಟಿಎಂ ಲೇಔಟ್ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ, ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆದಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೇ ಉಳಿದು, ಇಂದು ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ಹಿಂದೆ ಪಡೆದ ಬಳಿಕ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಹಿಂಪಡೆದಿದ್ದೇನೆ ಎಂದರು.