ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆಂದು ಅಧಿವೇಶನ ಆರಂಭಿಸಿದರು. ಆದರೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಕಾಲಹರಣ ಮಾಡುತ್ತಿದ್ದಾರೆ, ಈ ಮೂಲಕ ಸಮಯ ಮುಂದೂಡುವ ಕೆಲಸ ಮಾಡಿ ಸದನದಲ್ಲಿ ಗದ್ದಲ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಿಯಮಬದ್ದವಾಗಿ ಹಾಗೂ ಸಂವಿಧಾನಿತ್ಮಕವಾಗಿ ನೀಡಿದ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುತ್ತಿಲ್ಲ.
ಇನ್ನೊಂದೆಡೆ ಸದನದಲ್ಲಿ ವಿಶ್ವಾಸಮತಯಾಚನೆಗೆ ಅವಕಾಶ ನೀಡದೇ ಕಾಲಹರಣ ಮಾಡುತ್ತಿದ್ದಾರೆ. ಸ್ಪೀಕರ್ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.